
ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ಕೂದಲೆಳೆ ಅಂತರದಲ್ಲಿ ಪರಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹುಣಸೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ರಸ್ತೆ ಬದಿ ಕಾರು ನಿಲ್ಲಿಸಿ ಇಳಿದಿದ್ದಾರೆ. ಕ್ಷಣಾರ್ಧದಲ್ಲಿ ಕಾರು ಧಗ ಧಗನೆ ಹೊತ್ತಿ ಉರಿದಿದೆ.
ಎರ್ಟಿಗಾ ಕಾರು ಗೋವಾದಿಂದ ಆಂಧ್ರಪ್ರದೇಶದತ್ತ ತೆರಳುತ್ತಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಕಾರಿನಲ್ಲಿದ್ದವರು ಬಚಾವ್ ಆಗಿದ್ದಾರೆ.