*ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ದುರ್ಮರಣ*
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಭದ್ರಾ ನಾಲೆಗೆ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಹೊಸೂರಿನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ದಾವಣಗೆರೆ ಮೂಲದ ಸಿದ್ದೇಶ್ ಹಾಗೂ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಆರು ಜನರು ಮಂಗಳೂರು ಬಳಿಯ ಕೊರಗಜ್ಜ ದೇವಸ್ಥಾನಾಕ್ಕೆ ಹೋಗಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.Home … Continue reading *ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ದುರ್ಮರಣ*
Copy and paste this URL into your WordPress site to embed
Copy and paste this code into your site to embed