Kannada NewsKarnataka NewsLatest

*ಅಮೆರಿಕಾದಲ್ಲಿ ದಾವಣಗೆರೆಯ ಪತಿ-ಪತ್ನಿ-ಮಗು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಅಮೆರಿಕಾದಲ್ಲಿ ದಾವಣಗೆರೆ ಮೂಲದ ಗಂಡ-ಹೆಂಡತಿ ಹಾಗೂ ಮಗು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

Home add -Advt

ಅಮೆರಿಕಾದ ಮೇರಿಲ್ಯಾಂಡ್ ನ ಬಾಲ್ಟಿಮೋರ್ ನಲ್ಲಿ ವಾಸವಾಗಿದ್ದ ದಾವಣಗೆರೆ ಮೂಲದ ಇಂಜಿನಿಯರ್ ದಂಪತಿ, ಯೋಗೇಶ್ ಹೊನ್ನಾಳ (37), ಪ್ರತಿಭಾ (35) ಹಾಗೂ ಮಗ ಯಶ್ (6) ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಪತಿ ಯೋಗೇಶ್ ನೇ ಪತ್ನಿ ಹಾಗೂ ಮಗನನ್ನು ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ದಾವಣಗೆರೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹಾಗೂ ಪತ್ನಿ ಪ್ರತಿಭಾ ಕಳೆದ 9 ವರ್ಶ್ಜಗಳಿಂದ ಅಮೆರಿಕಾದಲ್ಲಿ ವಾಸವಾಗಿದ್ದು, ಇಬ್ಬರೂ ಇಂಜಿನಿಯರಿಂಗ್ ವೃತ್ತಿಯಲ್ಲಿದ್ದರು. ದಂಪತಿಗೆ ಯಶ್ ಎಂಬ ಆರು ವರ್ಷದ ಮಗ ಕೂಡ ಇದ್ದ. ಮೇರಿಲ್ಯಾಂಡ್ ನ ಬಾಲ್ಟಿಮೋರ್ ನಲ್ಲಿ ಮನೆಯನ್ನು ಖರೀದಿ ಅಲ್ಲಿಯೇ ವಾಸವಾಗಿದ್ದ ಕುಟುಂಬ ಇದೀಗ ಶೂಟ್ ಮಾಡಿಕೊಂಡು ಸಾವನ್ನಪ್ಪಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಯೋಗೇಶ್ ಮೊದಲು ತನ್ನ ಪತ್ನಿ ಹಾಗೂ ಮಗನಿಗೆ ಗುಂಡಿಟ್ಟು ಕೊಂದು ಬಳಿಕ ತಾನೂ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇಂತಹ ನಿರ್ದಾರ ಕೈಗೊಂಡಿದ್ದಾದರೂ ಯಾಕೆ ಎಂಬುದು ಪೊಲೀಸರ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.


Related Articles

Back to top button