Kannada NewsKarnataka NewsLatest

*ಮನೆ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಇಬ್ಬರು ಅಪ್ರಾಪ್ತ ಬಾಲಕರು, ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

Home add -Advt

ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ತನ್ನ ಮನೆ ಬಳಿಯೇ ಆಟವಾಡುತ್ತಿದ್ದಳು. ಈ ವೇಳೆ 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಅಪ್ತರು ಬಾಲಕಿಯನ್ನು ನಂಬಿಸಿ ಪಕ್ಕದ ಮನೆಗೆ ಕರೆದೊಯ್ದಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

ಮಗಳು ಮನೆಯಲ್ಲಿ ಕಾಣದಿದ್ದಾಗ ಪೋಷಕರು ಹುಡುಕಾಡಿದ್ದಾರೆ. ಕರೆದರೂ ಮಗಳ ಸುಳಿವಿಲ್ಲ. ಆತಂಕಕ್ಕೊಳಗಾದ ಪೋಷಕರು ಅಕ್ಕಪಕ್ಕದ ಮನೆಗಳಿಗೆ ಹೋಗಿ ನೋಡಿದ್ದಾರೆ. ಈ ವೇಳೆ ನೆರೆಮನೆಯೊಳಗೆ ಬಾಲಕಿ ಪತ್ತೆಯಾಗಿದ್ದು, ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಹದಡಿ ಠಾಣೆ ಪೊಲೀಸರು ಇಬ್ಬರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button