
ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಮೂಲದ ಪಿಎಸ್ ಐ ಓರ್ವರು ತುಮಕೂರಿನ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪಿಎಸ್ ಐ ನಾಗರಾಜ್ (35) ಆತ್ಮಹತ್ಯೆಗೆ ಶರಣಾಗಿರುವವರು. ದಾವಣಗೆರೆ ನಗರದ ಬಡಾವಣೆ ಠಾಣೆಯ ಪಿಎಸ್ ಐ ಆಗಿದ್ದ ನಾಗರಾಜ್ ಇದೀಗ ತುಮಕೂರಿನ ದ್ವಾರಕ ಲಾಡ್ಜ್ ನ ರೂಮಿನಲ್ಲಿ ನೇಣಿಗೆ ಶರಣಾಗಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ನಾಗರಾಜ್ ಜುಲೈ 1ರಂದು ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿ ವಾಸವಾಗಿದ್ದರು. ಬಳಿಕ ರೂಮಿನಿಂದ ಹೊರಬಂದಿಲ್ಲ. ಇಂದು ಬೆಳಿಗ್ಗೆ ಲಾಡ್ಜ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗಲೇ ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.