Latest
ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಯರಾಮ್(18) ಮೃತ ವಿದ್ಯಾರ್ಥಿ. ರಿಸಲ್ಟ್ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದು, ಫೇಲಾದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.




