Kannada NewsKarnataka NewsLatest

*ಮರಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ.

ಗೋವಾ ಪ್ರವಾಸದಿಂದ ವಾಪಾಸ್ ಆಗುತ್ತಿದ್ದಗ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಜಗಳೂರು ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button