*ಮರಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ. ಗೋವಾ ಪ್ರವಾಸದಿಂದ ವಾಪಾಸ್ ಆಗುತ್ತಿದ್ದಗ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಗಳೂರು ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ. *ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ*