Kannada NewsKarnataka NewsLatest

*ಚಲಿಸುತ್ತಿದ್ದ ಬಸ್ ನ ಆಕ್ಸಲ್ ಕಟ್ ಆಗಿ ಭೀಕರ ಅಪಘಾತ: ವಿದ್ಯಾರ್ಥಿ ಸಾವು; 20 ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಬಸ್ ನ ಆ್ಯಕ್ಸಲ್ ಕಟ್ ಆಗಿ ಬಸ್‌ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt

Related Articles

Back to top button