Beereshwara 27
Emergency Service

*ಆಟವಾಡುವ ವೇಳೆ ಗೋಡೆ ಕುಸಿತ; ಬಾಲಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಆಟವಾಡುತ್ತಿದ್ದ ಬಾಲಕನ ಮೇಲೆ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸಾಪುರದಲ್ಲಿ ನಡೆದಿದೆ.

11 ವರ್ಷದ ನಾಗಾರ್ಜುನ ಮೃತ ಬಾಲಕ. ಪಕ್ಕದ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ. ಶಿಥಿಲಾವಸ್ಥೆಯಲ್ಲಿದ್ದ ಗೋಡೆ ಕುಸಿದು ಬಾಲಕ ಸಾವನ್ನಪ್ಪಿದ್ದಾನೆ.

ಸಿದ್ದಪ್ಪ ಎಂಬುವವರಿಗೆ ಸೇರಿದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ದಾವಣಗೆರೆಯ ಆರ್ ಎಂ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://pragati.taskdun.com/bescomfake-job-offeraccused-arrested/

Bottom Ad 1
Bottom Ad 2

You cannot copy content of this page