
ಪ್ರಗತಿವಾಹಿನಿ ಸುದ್ದಿ: ಕಳ್ಳತನ ಮಾಡಿದ ಆರೋಪದಲ್ಲಿ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ ಶರ್ಟ್ ಬಿಚ್ಚಿಸಿ ಮನ ಬಂದಂತೆ ಥಳಿಸಿದ ಯುವಕರ ಗುಂಪು, ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಅಸ್ತಾಪನಹಳ್ಳಿಯಲ್ಲಿ ಹಕ್ಕಿಪಿಕ್ಕಿ ಜನಾಂಗದ ಯುವಕರ ಗುಂಪು, ತಮ್ಮದೇ ಜನಾಂಗದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕಳ್ಳತನ ಮಾಡಿರುವ ಆರೋಪದಲ್ಲಿ ಬಾಲಕನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಮರ್ಮಾಂಗಕ್ಕೆ ಕೆಂಪಿರುವೆಬಿಟ್ಟು ಕೊಡಬಾರದ ಹಿಂಸೆ ಕೊಟ್ಟಿದ್ದಾರೆ.