Election NewsKarnataka NewsLatestPolitics

*BREAKING: ದಾವಣಗೆರೆಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು*

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದು, ಅಧಿಕ್ರ‍ಿತ ಘೋಷಣೆ ಮಾತ್ರ ಬಾಕಿ ಇದೆ.

Home add -Advt

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 6400 ಕ್ಕೂ ಅಧಿಕ ಅಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಸೋಲನುಭವಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಸೋಲನುಭವಿಸಿದ್ದಾರೆ. ಈ ಮೂಲಕ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ಼್ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು, ವಿಜಯೋತ್ಸವ ಆಚರಿಸುತ್ತಿದ್ದಾರೆ.


Related Articles

Back to top button