Latest

ಕೊರೊನಾ ಸೋಂಕಿತರ ಮೃತದೇಹವನ್ನು ಕಸದಂತೆ ಬಿಸಾಕುತ್ತಿದ್ದಾರೆ ಸಿಬ್ಬಂದಿ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವ ರೋಗಿಗಳ ಮೃತ ದೇಹವನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೊಂಡಗಳನ್ನು ತೋಡಿ ಅಮಾನವೀಯವಾಗಿ ಬಿಸಿಕಿ ಮುಚ್ಚುತ್ತಿರುವ ಘಟನೆಗಳು ಹೆಚ್ಚುತ್ತಿವೆ. ನಿನ್ನೆ ಬಳ್ಳಾರಿಯಲ್ಲಿ ನಡೆದ ಘಟನೆ ಬೆನ್ನಲ್ಲೇ ಇಂದು ದಾವಣಗೆರೆಯಲ್ಲಿ ಕೂಡ ಇಂತಹ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆಯ ಚನ್ನಗಿರಿ ತಾಲೂಕಿನ 56 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಕೂಡ ಅಂದೇ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಚನ್ನಗಿರಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಮಾಡಲಾಗಿತ್ತು. ಜೆಸಿಬಿ ಮೂಲಕ ಮೃತದೇಹವನ್ನು ಎತ್ತಿಕೊಂಡು ಹೋಗಿ ಕಸವನ್ನು ಬಿಸಾಕುವಂತೆ ಬಿಸಾಕಿ ಮಣ್ಣುಮುಚ್ಚಲಾಗಿದೆ.

ನಿನ್ನೆ ಬಳ್ಳಾರಿಯಲ್ಲಿ ಒಂದೇ ದಿನ 9 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಅವರ ಮೃತ ದೇಹವನ್ನು ಎರಡು ಹೊಂಡಗಳನ್ನು ತೆಗೆದು ಅದರಲ್ಲಿ ಬಿಸಾಕಿ ಮಣ್ಣು ಮುಚ್ಚಿದ್ದರು. ಈ ಬಗ್ಗೆ ಸಾರ್ವಜನರು ಆಕ್ರೋಶ ವ್ಯಕ್ತಪಡಿಸಿದ ಬನ್ನಲ್ಲೆ ಸಿಎಂ ಬಿ ಎಸ್ ಯಡಿಯೂರಪ್ಪ ಮಾನವೀಯತೆಗಿಂತ ದೊಡ್ಡದು ಯಾವುದಿಲ್ಲ, ಅದನ್ನು ಗಮನದಲ್ಲಿಟ್ಟು
ಕೆಲಸ ಮಾಡುವಂತೆ ಸೂಚಿಸಿದ್ದರು. ಅಲ್ಲದೇ ಸಿಬ್ಬಂದಿಗಳನ್ನು ಅಮಾನತ್ತು ಮಾಡಲಾಗಿತ್ತು.

Home add -Advt

Related Articles

Back to top button