CrimeKannada NewsKarnataka NewsLatest

*ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಹರಿಬಿಟ್ಟು ವಿಕೃತಿ ಮೆರೆದ ದುರುಳರು*

ಪ್ರಗತಿವಾಹಿನಿ ಸುದ್ದಿ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 41 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಕಾಮುಕರು, ಅದನ್ನು ವಿಡಿಯೋ ಮಾಡಿ ಸಾಮಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.

Home add -Advt

ಜೂನ್ 3ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಂದು ದೂರು ದಾಖಲಿಸಲಾಗಿದೆ. ಮಹಿಳೆ ಪತಿ ಜೊತೆ ಜಗಳವಾಡಿ ತವರಿಗೆ ಹೊರಟ್ಟಿದ್ದರು. ಈ ವೇಳೆ ಹಂದಿ ಬೇಟೆಗೆ ತೆರಳಿದ್ದ ಯುವಕರು ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಕೂಲ್ ಡ್ರಿಂಕ್ಸ್‌ನಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಬಳಿಕ ತೋಟಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿಯಿಂದ ಮುಂಜಾನೆಯವರೆಗೂ ಯುವಕರ ಗುಂಪು ವಿಕೃತಿ ಮೆರೆದಿತ್ತು. ಬಳಿಕ ಬೆತ್ತಲೆ ಫೋಟೋ, ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ಘಟನೆ ಸಂಬಂಧ ಸಂತ್ರಸ್ತೆ ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಗಂಭೀರವಾಗುತ್ತಿದ್ದಂತೆ ಆರೋಪಿಗಳು ವೀಡಿಯೋ ಡಿಲೀಟ್ ಮಾಡಿದ್ದಾರೆ. ಪ್ರಕರಣ ಸಂಬಂಧ ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಹಾಗೂ ಮಧು ಎಂಬ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿಗಳೆಲ್ಲ ಯಲೋದಹಳ್ಳಿಯವರಾಗಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button