
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ ಬೆಳಕಿಗೆ ಬಂದಿದೆ. ಶಾಲಾ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಪಾಠ ಮಾಡಬೇಕಾದ ಶಿಕ್ಷಕನೇ ಅಪ್ರಾಪ್ತ ಬಾಲಕಿ ಮೇಲೆ ಶಾಲೆಯಲ್ಲಿಯೇ ನಿರಂತರ ಅತ್ಯಾಚಾರವೆಸಗಿದ್ದು, ವಾರದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಬಳಿಕ ಬಾಲಕಿ ದಿನದಿಂದ ದಿನಕ್ಕೆ ಅನಾರೋಗ್ಯಕ್ಕೀಡಾಗಿದ್ದಾಳೆ. ಆದರೂ ಶಿಕ್ಷಕನ ಬೆದರಿಕೆಗೆ ಹೆದರಿ ಬಾಲಕಿ ಪೋಷಕರ ಬಳಿ ಬಾಯಿಬಿಟ್ಟಿಲ್ಲ.
ಬಾಲಕಿ ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಂತೆ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ತಾಪಸಣೆ ನಡೆಸಿದಾಗ ಬಾಲಕಿ ಮೇಲೆ ಅತ್ಯಾಚಾರವೆಸಗಲಾಗಿರುವ ವಿಷಯ ತಿಳಿದುಬಂದಿದೆ. ಈ ವೇಳೆ ವಿಚಾರಿಸಾದ ಬಾಲಕಿ ಶಿಕ್ಷಕನ ಕೃತ್ಯದ ಬಗ್ಗೆ ವಿವರಿಸಿದ್ದಾಳೆ. ತಕ್ಷಣ ಪೋಷಕರು ದಾವಣಗೆರೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಆರೋಪಿ ಶಿಕ್ಷಕನನ್ನು ಶಾಲೆಯಿಂದಲೇ ಬಂಧಿಸಿ ಕರೆದೊಯ್ದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.