Kannada NewsKarnataka NewsLatest

*ಅಧಿಕ ಡೋಸೆಜ್ ಇಂಜಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ವೈದ್ಯಕೀಯ ವಿದ್ಯಾರ್ಥಿಯೊಬ್ಬ ಅಧಿಕಾ ದೋಸೇಜ್ ಇಂಜಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ.

ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್​​ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿ ಇಂಟರ್​ನ್ಯಾಷನಲ್ ಹಾಸ್ಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Home add -Advt

ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ. ಹಾನಿಕಾರಕ ಅಥವಾ ಅಧಿಕ ಡೋಸೆಜ್ ಇಂಜೆಕ್ಷನ್ ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ನಿನ್ನೆ ಮಧ್ಯಾಹ್ನದಿಂದ ರೂಮ್​​ ಲಾಕ್​ ಆಗಿದ್ದ ಹಿನ್ನೆಲೆಯಲ್ಲಿ ಅನುಮಾನ ಬಂದು ಇಂದು ಕೊಠಡಿ ಬಾಗಿಲು ಒಡೆದು ಒಳಗೆ ಹೋದಾಗ ಆತ್ಮಹತ್ಯೆ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button