ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರಿಗೆ ಕ್ಲಾಸ್ ರೂಂ ನಲ್ಲಿ ವಿದ್ಯಾರ್ಥಿಗಳು ಕೀಟಲೆ ಮಾಡಿ ಹಿಂಸಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ವಿದ್ಯಾರ್ಥಿಯೋರ್ವ ಶಿಕ್ಷಕರ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದಾನೆ.
ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಮಾಡಲು ಕೊಠಡಿಗೆ ಬಂದ ಶಿಕ್ಷಕ ಪ್ರಕಾಶ್ ತಲೆ ಮೇಲೆ ಕಸದ ಬುಟ್ಟಿ ಇಟ್ಟು, ಕೀಟಲೆ ಮಾಡಿ ನಿಂದಿಸಿದ್ದರು.
ಕೊಠಡಿಯಲ್ಲಿ ಗುಟ್ಕಾ ಪ್ಯಾಕೆಟ್ ಮತ್ತಿತರ ತ್ಯಾಜ್ಯಗಳು ಬಿದ್ದಿದ್ದನ್ನು ಕಂಡು ಶಿಕ್ಷಕರು ಬುದ್ದಿ ಹೇಳಿದ್ದೇ ಈ ಘಟನೆಗೆ ಕಾರಣವಾಗಿತ್ತು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾರ್ವಜನಿಕರು ವಿದ್ಯಾರ್ಥಿಗಳ ದುಷ್ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದರು.
ವಿದ್ಯಾರ್ಥಿಗಳ ನಡವಳಿಕೆಯಿಂದ ಬೇಸರಗೊಂಡ ಶಿಕ್ಷಕರಿಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಶಿಕ್ಷಕರ ನಿವೃತ್ತಿಗೆ ಒಂದು ವರ್ಷ ಬಾಕಿ ಇದ್ದು, ಶಿಕ್ಷಕ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಪುಂಡಾಟಕ್ಕೆ ಗ್ರಾಮಸ್ಥರು ಶಿಕ್ಷೆ ವಿಧಿಸಿದ್ದು, ಶಿಕ್ಷಕನ ಕಾಲಿಗೆ ಬಿದ್ದು ಕ್ಷಮೆಯಾಚಿಸುವಂತೆ ಹೇಳಿದ್ದಾರೆ. ಇದೀಗ ವಿದ್ಯಾರ್ಥಿಯೊಬ್ಬ ಶಿಕ್ಷಕರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾನೆ.
17 ಜನರಲ್ಲಿ ಒಮಿಕ್ರಾನ್ ಪತ್ತೆ; ಮಹಾರಾಷ್ಟ್ರದಲ್ಲಿ 144 ಸೆಕ್ಷನ್ ಜಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ