
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಬೆಂಗಳೂರಿನ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ದಾವಣಗೆರೆಯಲ್ಲಿ ಕೂಡ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆಯ ಭರತ್ ಕಾಲೋನಿಯಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು 6 ವರ್ಷದ ಮಗ ದೃವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗು ಮತ್ತು ಹೆಂಡತಿಗೆ ವಿಷ ಕುಡಿಸಿ ಕೃಷ್ಣಾ ನಾಯ್ಕ್ ತಾನು ನೇಣಿಗೆ ಕೊರಳೊಡ್ಡಿದ್ದಾನೆ.
ಕೃಷ್ಣಾ ನಾಯ್ಕ್ ಲಾರಿ ಚಾಲಕನಾಗಿದ್ದ ಎಂದು ತಿಳಿದುಬಂದಿದೆ. ಆರ್.ಎಂ.ಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ