Latest

ಔಷಧಿ ಕೊಡುವುದಾಗಿ ಹೇಳಿ ವಂಚನೆ; ಇಬ್ಬರು ಯುವಕರ ಬಂಧನ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಔಷಧಿ ನೀಡುವ ನೆಪದಲ್ಲಿ ರೈತರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ ಇಬ್ಬರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.

ಮೆಡಿಕಲ್ ಕಾಲೇಜಿನಿಂದ ಬಂದಿದ್ದೇವೆ. ರೋಗಗಳಿಗೆ ಔಷಧಿ ಕೊಡುತ್ತೇವೆ ಎಂದು ಹೇಳಿ ರೈತರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದರು. ಈ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು ಯುವಕರಿಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸೋಮಶೇಖರ ಹಾಗೂ ಚಿರಂಜೀವಿ ಬಂಧಿತ ಆರೋಪಿಗಳು. ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button