ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ತುಂಗಭದ್ರಾ ಸೇತುವೆ ಮೇಲಿಂದ ಕಾರು ಕೆಳಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.
ಕಾರು ಬರೋಬ್ಬರಿ 80 ಅಡಿ ಎತ್ತರದ ಸೇತುವೆಯಿಂದ ಕೆಳಗೆ ಬಿದ್ದಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ಹರ್ಷಿತ್ (27) ಎಂದು ಗುರುತಿಸಲಾಗಿದೆ.
ಗೊಲ್ಲರಹಟ್ಟಿಯಿಂದ ಹೊನ್ನಾಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ