Kannada NewsLatest

*ಭೂಗತಪಾತಕಿ ದಾವೂದ್ ಇಬ್ರಾಹಿಂ ಗೆ ವಿಷಪ್ರಾಶನ; ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಭೂಗತಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿದ್ದಾನೆ.

ದಾವೂದ್ ಇಬ್ರಾಹಿಂ ಗೆ ಅಪರಿಚಿತ ವ್ಯಕ್ತಿ ವಿಷಪ್ರಾಶನ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಾವೂದ್ ಆರೋಗ್ಯ ಹದಗೆಟ್ಟಿದ್ದು, ಕರಾಚಿ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿದೆ.

Home add -Advt

ಇತ್ತೀಚಿನ ಮಾಹಿತಿ ಪ್ರಕಾರ ದಾವೂದ್ ಇಬ್ರಾಹಿಂ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕರಾಚಿ ಆಸ್ಪತ್ರೆಯಲ್ಲಿರುವ ದಾವೂದ್ ಇಬ್ರಾಹಿಂ ಬಗ್ಗೆ ಹೆಚ್ಚಿನ ಸುದ್ದಿ ತಿಳಿಯದಂತೆ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಆತ ದಾಖಲಾಗಿರುವ ಆಸ್ಪತ್ರೆಗೆ ವೈದ್ಯರನ್ನು ಬಿಟ್ಟು ಬೇರಾರಿಗೂ ಪ್ರವೇಶವಿಲ್ಲದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.


Related Articles

Back to top button