
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಸುಮಂತ್ (21) ಮೃತ ವಿದ್ಯಾರ್ಥಿ. ಸ್ನೇಹಿತನ ಮನೆಗೆಂದು ಬೈಕ್ ನಲ್ಲಿ ಹೋಗುತ್ತಿದ್ದಾಗ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸುಮಂತ್ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



