ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.
ದಾವೂದ್ ಇಬ್ರಾಹಿಂ ಹಾಗೂ ಆತನ ಸಹಚರರು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್ ಹಾಗೂ ಅಲ್ ಖೈದಾದೊಂದಿಗೆ ಸಕ್ರಿಯರಾಗಿದ್ದಾರೆ. ದಾವೂದ್ ಇಬ್ರಾಹಿಂ ಬಗ್ಗೆ ಸುಳಿವು ನೀಡಿದವರಿಗೆ 25 ಲಕ್ಷ ಬಹುಮಾನ ನೀಡಲಾಗುವುದು ಎಂದು ಆತನ ಹೊಸ ಫೋಟೋವನ್ನು ಎನ್ ಐ ಎ ಬಿಡುಗಡೆ ಮಾಡಿದೆ.
ಅಲ್ಲದೇದಾವೂದ್ ಸಹಚರ ಚೋಟಾ ಶಕೀಲ್ ಗೆ 20 ಲಕ್ಷ ಬಹುಮಾನ, ಇತರ ಭಯೋತ್ಪಾದಕರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಹಾಗೂ ಟೈಗರ್ ಮೆಮನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 15 ಲಕ್ಷ ನೀಡುವುದಾಗಿ ಎನ್ ಐ ಎ ತಿಳಿಸಿದೆ.
ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ