Belagavi NewsBelgaum NewsGamesKannada NewsKarnataka NewsNationalPolitics

*ಆರೋಗ್ಯ ಇಲಾಖೆಯ ಮಹತ್ವದ ಸಭೆ ನಡೆಸಿದ ಡಿಸಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆರೋಗ್ಯ ಮತ್ತು ಕುಕ ಅಧಿಕಾರಿಗಳ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬುಧವಾರ (ಮಾ.18) ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಂತರ ಇಲಾಖೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಯಿತು.

ಈ ವೇಳೆ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ ನಗರದಾದ್ಯಂತ 50 ಶೈಕ್ಷಣಿಕ ಸಂಸ್ಥೆಗಳು ಹಾಗೂ ಉಳಿದ ತಾಲೂಕುಗಳಲ್ಲಿ 100 ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸುವಂತೆ ಕ್ರಮ ನಿರ್ವಹಿಸಲು ಸೂಚಿಸಿದರು.

Home add -Advt

ತಂಬಾಕು ಉತ್ಪನ್ನ ಮಾರಾಟಾ ಮಾಡುತ್ತಿರುವ ಅಂಗಡಿ ಮಾಲಿಕರು ಕೋಟ್ಟಾ ಕಾಯ್ದೆಯನ್ನು ಮರು ಉಲ್ಲಘಂನೆ ಮಾಡುತ್ತಿದ್ದರೆ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಸಭೆಗೆ ನಿರ್ದೇಶನ ನೀಡಿದರು.

ಡಾ. ವಿಶ್ವನಾಥ ಭೋವಿ ಇವರು ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದಲ್ಲಿ ಬರುವ 1588 ಶೈಕ್ಷಣಿಕ ಸಂಸ್ಥೆಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸಲಾಗಿರುವ ವಿಷಯವನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಕೋಟ್ಟಾ ಕಾಯ್ದೆ ಸೆಕ್ಷನ್-4, 6(ಎ), 6(ಬಿ) ಮತ್ತು 6(ಸಿ) ಅಡಿಯಲ್ಲಿ ಒಟ್ಟು 64 ಕಾರ್ಯಾಚರಣೆಯನ್ನು ನಗರಾದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆಯ್.ಪಿ.ಗಡಾದ, ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣಧೋಳಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Related Articles

Back to top button