
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವದೆಹಲಿಯ ಸೆಂಟ್ರಲ್ ಬೋರ್ಡ ಆಫ್ ಸೆಕೆಂಡರಿ ಎಜುಕೇಶನ್ ಇವರ ವತಿಯಿಂದ ಜಿಲ್ಲೆಯಲ್ಲಿ ದಿನಾಂಕ:17.02.2026 ರಿಂದ 11.04.2026 ರವರೆಗೆ 10 ಮತ್ತು 12ನೇ ತರಗತಿಗಳ ಬೋರ್ಡ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಯುವ ಕುರಿತು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಅಡಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.


