ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಹಾಗೂ ಕಾರ್ಮಿಕ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಮಕ್ಕಳ ಸಹಾಯವಾಣಿ-1098, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸ್ಪಂದನಾ ಸೇವಾ ಸಂಸ್ಥೆಗಳ ಸಹಯೊಗದೊಂದಿಗೆ ಅ.15 ರಂದು ಕ್ಷೀಪ್ರ ಕಾರ್ಯಾಚರಣೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯಿಂದ ನಗರದಲ್ಲಿ ಬೀದಿ ಬದಿ ಮಕ್ಕಳ (ಆಪರೇಷನ ಮುಸ್ಕಾನ್) ರಕ್ಷಣಾ ಕಾರ್ಯಚರಣೆಗೆ ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್‌ರವರು ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.
ಬೆಳಗಾವಿ ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ನಗರದಲ್ಲಿ ಮಕ್ಕಳನ್ನು ಬಾರ್ ಮತ್ತು ರೆಸ್ಟೋರೆಂಟ್, ಗ್ಯಾರೇಜ್, ಹೊಟೇಲ್ ಗಳು, ಧಾಬಾಗಳು ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದಲ್ಲಿ ಅಂತಹ ಮಾಲಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ವಿವಿಧ ನಗರಗಳಲ್ಲಿ ಮಕ್ಕಳನ್ನು ಬಾರ್ ಮತ್ತು ರೆಸ್ಟೋರೆಂಟ್, ಜ್, ಹೊಟೇಲ್ ಗಳು, ಧಾಬಾಗಳು ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಮಕ್ಕಳನ್ನು ರಕ್ಷಣೆ ಮಾಡಿ ಸೂಕ್ತ ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ