Kannada NewsLatest

ಬಾರ್ ಗೆ ನುಗ್ಗಿದ ಬೆಳಗಾವಿ ಜಿಲ್ಲಾಧಿಕಾರಿ!

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಕಾರಿನಿಂದಿಳಿದ ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲರು ನೇರವಾಗಿ ಪಕ್ಕದಲ್ಲೇ ಇರುವ ಆನಂದ ಬ್ರ್ಯಾಂಡಿ ಶಾಪ್ ಗೆ ತೆರಳಿ ಲೈಸೆನ್ಸ್, ಲಭ್ಯವಿರುವ ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ಕೈಗೊಂಡರು.

ಜಿಲ್ಲಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಇರುವ ಆನಂದ ಬ್ರ್ಯಾಂಡಿ ಅಂಗಡಿ ಮತ್ತು ಲಕ್ಷ್ಮೀ ಬಾರ್ ಮತ್ತು ರೆಸ್ಟೋರೆಂಟ್ ಗೆ ಸ್ವತಃ ತೆರಳಿ ಪರಿಶೀಲನೆ ಕೈಗೊಂಡರು. ಖುದ್ದಾಗಿ ಕೆಲವು ಮದ್ಯದ ಬಾಟಲ್ ಗಳನ್ನು ತೆಗೆದುಕೊಂಡು ಅವುಗಳ ಗುಣಮಟ್ಟ ಪರಿಶೀಲಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.

ಈ ಸಂದರ್ಭದಲ್ಲಿ ‌ಜಿಲ್ಲಾಧಿಕಾರಿಗಳ ಜತೆ ಆಗಮಿಸಿದ ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಗ್ರಾಮದಲ್ಲಿರುವ ಮದ್ಯ ಮಾರಾಟ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಆಗ್ರಹಿಸಿದರು.

Home add -Advt

ಗ್ರಾಮಸ್ಥರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಸದ್ಯಕ್ಕೆ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದ್ದು, ನಿಯಮಗಳ ಉಲ್ಲಂಘನೆಯ‌ ಕುರಿತು ಕೂಲಂಕುಶವಾಗಿ ಪರಿಶೀಲನೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಜಿಪಂ ಸಿಇಓ ದರ್ಶನ್, ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು.

ಚಿಲುಮೆ ಕಚೇರಿಯಲ್ಲಿ ಸಚಿವರಿಗೆ ಸೇರಿದ ಚೆಕ್ ಪತ್ತೆ; ಆ ಸಚಿವರು ಯಾರು?

https://pragati.taskdun.com/voter-id-scamchilume-ngopolice-raid/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button