Kannada NewsLatest

*ಊಟೋಪಚಾರ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವರದಿಗಾಗಿ ವಿವಿಧೆಡೆಯಿಂದ ಆಗಮಿಸಿದ ಮಾಧ್ಯಮ ಪ್ರತಿನಿಧಿಗಳು, ಮಾರ್ಷಲ್ ಗಳು ಹಾಗೂ ಸಚಿವಾಲಯ ಅಧಿಕಾರಿಗಳಿ ಮಾಡಲಾಗಿರುವ ಊಟೋಪಚಾರದ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪರಿಶೀಲಿಸಿದರು.

ಮಂಗಳವಾರ(ಡಿ.20) ಊಟೋಪಚಾರ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಊಟದ ಗುಣಮಟ್ಟದ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಂದ ಮಾಹಿತಿ ಪಡೆದ ಅವರು, ಊಟದ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗಬಾರದು ಎಂದು ನಿಯೋಜಿತ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಬಳಿಕ, ಅಧಿಕಾರಿಗಳ, ಮಾರ್ಷಲ್, ಜನರಲ್ ಊಟದ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.

ಈ ವೇಳೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಊಟೋಪಚಾರ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆ ಆಗಬಾರದು. ಸಂಬಂಧಿತ ಅಧಿಕಾರಿಗಳು ಊಟೋಪಚಾರದ ಕುರಿತು ಪರಿಶೀಲನೆ ನಡೆಸಬೇಕು ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಯಾವುದೇ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲಹೊತ್ತು ಅಲ್ಲಿಯೇ ಕುಳಿತ ಜಿಲ್ಲಾಧಿಕಾರಿಗಳು, ಸ್ವತಃ ಪ್ರವೇಶಪತ್ರಗಳನ್ನು ಪರಿಶೀಲಿಸಿದರು.

ಈ ವೇಳೆ ಹೆಚ್ಚುವರಿ ಪ್ರಾದೇಶಕ ಆಯುಕ್ತರು ಹಾಗೂ ಆಹಾರ ಉಪ ಸಮಿತಿಯ ಮುಖ್ಯಸ್ಥರಾದ ಗೀತಾ ಕೌಲಗಿ ಆಹಾರ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹ್ಮದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ, ಸಿದ್ಧೇಶ್ವರಪ್ಪ ಜಿ.ಬಿ. ಸೇರಿದಂತೆ ಇತರೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

*ಕೊಟ್ಟ ಮಾತು ತಪ್ಪಿದ ರಾಜ್ಯ ಸರ್ಕಾರ; ಪಾದಯಾತ್ರೆ ಆರಂಭ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ*

https://pragati.taskdun.com/belagavi2a-reservationpanchamasalijayamrutyunjaya-swamiji/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button