
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿದ್ದು, ಗದಗ ಹಾಗೂ ಮಂಗಳೂರಿನಲ್ಲಿ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಗದಗ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಜಿಲ್ಲಾಡಳಿತ ಭವನವನ್ನು ಐದು ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಸಂದೇಶ ರವಾನಿಸಲಾಗಿದೆ.
ಬಾಂಬ್ ಬೆದರಿಕೆ ಬೆನ್ನಲ್ಲೇ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು, ಅಧಿಕಾರಿಗಳು ಆತಂಕಕ್ಕೀಡಾಗಿದ್ದಾರೆ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಬಾಂಬ್ ಪತ್ತೆದಳ, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಶೋಧಕಾರ್ಯ ನಡೆಸಿದೆ.
ಇದೇ ವೇಳೆ ಮಂಗಳೂರಿನಲ್ಲಿ ಆರ್.ಟಿ.ಒ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಅಲ್ಲಿಯೂ ಶೋಧ ಕಾರ್ಯಾಚರಣೆ ಮೂಲಕ ತಪಾಸಣೆ ನಡೆಸಲಾಗಿದೆ.

