*ಡಿಸಿ ಕಚೇರಿಯಲ್ಲಿ ನಿಂತು ಆಜಾನ್ ಕೂಗಿದ ಯುವಕ; ಇವತ್ತು ಇಲ್ಲಿ ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ ಎಂದು ಆವಾಜ್*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಜಾನ್ ಬಗ್ಗೆ ನೀದಿದ್ದ ಹೇಳಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ.
ಯುವಕ ಆಜಾನ್ ಕೂಗುತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಆಜಾನ್ ಬಗ್ಗೆ ಮಾತನಾಡಲು ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ. ನಾಳೆ ವಿಧಾನಸೌಧದ ಮೇಲೆ ಆಜಾನ್ ಕೂಗುತ್ತೇವೆ ಎಂದು ಮತ್ತೋರ್ವ ಯುವಕ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಈ ವೇಳೆ ಮುಸ್ಲಿಂ ಮುಖಂಡರೇ ಯುವಕರಿಗೆ ಬೈದು ಬುದ್ಧಿ ಹೇಳಿದ್ದಾರೆ. ಡಿಸಿ ಕಚೇರಿಯಲ್ಲಿ ನಿಂತು ಆಜಾನ್ ಕೂಗಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ