Kannada NewsKarnataka NewsLatest

*ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ : ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ‌ ಹಿನ್ನೆಲೆಯಲ್ಲಿ ಗುರುವಾರ (12-6-25) ದಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ಅಂಗನವಾಡಿ, ‌ಶಾಲೆಗಳಿಗೆ ರಜೆ ಘೋಷಣೆ
    ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯೂ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ‌ ಹಿನ್ನೆಲೆಯಲ್ಲಿ ಗುರುವಾರ (12-6-25) ದಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಳಿದಂತೆ ಪದವಿ ಪೂರ್ವ, ಡಿಪ್ಲೋಮಾ, ಐಟಿಐ, ಇಂಜಿನಿಯರಿಂಗ್‌ ಹಾಗೂ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ‌ ಹಾಗೂ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

Home add -Advt
  • ಮುಂಜಾಗ್ರತಾ ಕ್ರಮಕೈಗೊಳ್ಳಲು ಸಚಿವರಿಂದ ಸೂಚನೆ
    ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸಚಿವರು ಮನವಿ ಮಾಡಿದ್ದಾರೆ.

Related Articles

Back to top button