ಕೃಷ್ಣಾ ನದಿ ಭಾಗದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಭೇಟಿ
ಪ್ರಗತಿವಾಹಿನಿ ಸುದ್ದಿ – ಮಾಂಜರಿ : ಮಹಾರಾಷ್ಟ್ರದ ಜಲಾಶಯಗಳಿಂದ ಬಿಡಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ಅಂದಾಜು 4 ಅಡಿಗಳಷ್ಟು ನೀರು ಏರಿಕೆ ಆಗುವ ಸಂಭವವಿದ್ದು, ಕೃಷ್ಣಾ ನದಿ ಭಾಗದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂತ್ರಸ್ತರ ಜಿಲ್ಲಾಡಳಿತವು ರಕ್ಷಣಾ ಸಾಮಗ್ರಿಗಳೊಂದಿಗೆ ತಂಡಗಳನ್ನು ರಚಿಸಿ ಸಿದ್ಧತೆಯಲ್ಲಿಟ್ಟುಕೊಂಡಿದ್ದು, ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ. ನದಿಗಳ ಪಾತ್ರಗಳಲ್ಲಿರುವ ಜನರು ತಮ್ಮ ಅಗತ್ಯ ಸಾಮಗ್ರಿಗಳೊಂದಿಗೆ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು ಎಂದರು.
ಮಾಂಜರಿ- ಸೇತುವೆ ಭೇಟಿ ನೀಡಿದ ಅವರು ನೀರಿನ ಮಟ್ಟ ಪರಿಶೀಲಿಸಿದರು. ಜನವಸತಿ ಪ್ರದೇಶಗಳಲ್ಲಿ ನೀರು ನುಗ್ಗಿದರ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಜನರ ಸುರಕ್ಷತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.////
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ