Belagavi NewsBelgaum NewsKannada NewsKarnataka NewsLatest
*ಡಿಸಿಸಿ ಬ್ಯಾಂಕ್: ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಡಿಸಿಸಿ) ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ನಾಮಪತ್ರ ಸಲ್ಲಿಸಿದ್ದ ಇತರರು ವಾಪಸ್ ಪಡೆದಿದ್ದರಿಂದ ಚನ್ನರಾಜ ಹಟ್ಟಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಚುನಾವಣಾಧಿಕಾರಿಯಿಂದ ಸರ್ಟಿಫಿಕೇಟ್ ಸ್ವೀಕರಿಸಲಿದ್ದಾರೆ.
ಇತರೆ ಸಂಘ ಸಂಸ್ಥೆಗಳ ಕ್ಷೇತ್ರದಿಂದ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಸಿದ್ದರು.