ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಡೋಣಿ ಅಥವಾ ರಾಜೇಂದ್ರ ಅಂಕಲಗಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಹಾಲಿ ಅಧ್ಯಕ್ಷ ರಮೇಶ ಕತ್ತಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸಬರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಕಾಣುತ್ತಿದೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಶನಿವಾರ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಹೆಸರನ್ನು ಅವರೇ ಘೋಷಿಸಲಿದ್ದಾರೆ.
ಶುಕ್ರವಾರ ರಾತ್ರಿ ಈ ಸಂಬಂಧ ನಡೆದ ಸಭೆ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿದೆ. ಮುಖಂಡರ ಮಧ್ಯೆ ಒಮ್ಮತ ಸಾಧ್ಯವಾಗಿಲ್ಲ. ಹಾಗಾಗಿ ಶನಿವಾರ ಬೆಳಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ಆರಂಭವಾಗುವ ಹೊತ್ತಿಗೆ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಸಂಜೆ 4 ಗಂಟೆಗೆ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ. ಉಪಾಧ್ಯಕ್ಷ ಸ್ಥಾನಕ್ಕೂ ಹೊಸಬರನ್ನೇ ಆಯ್ಕೆ ಮಾಡಬೇಕೆನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈಗಾಗಲೆ ಬೇರೆ ಅಧಿಕಾರ ಹೊಂದಿರುವವರನ್ನು ಹೊರಗಿಟ್ಟು ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಬೇಕು. ಇದು ಭಾರತೀಯ ಜನತಾ ಪಾರ್ಟಿಯ ಭವಿಷ್ಯದ ದೃಷ್ಟಿಯಿಂದಲೂ ಉತ್ತಮ ಎನ್ನುವ ಅಭಿಪ್ರಾಯ ಮೂಡಬಂದಿದೆ.
ಕೊನೆಯ ಕ್ಷಣದಲ್ಲಿ ಏನು ಮ್ಯಾಜಿಕ್ ನಡೆಯಲಿದೆಯೋ ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ