Latest

ಕೊರೊನಾ ಸೋಂಕಿಗೆ ಲಸಿಕೆ ಸಿದ್ಧ; ಭಾರತದಲ್ಲಿ ಎರಡು ವ್ಯಾಕ್ಸಿನ್ ಬಳಕೆಗೆ ಗ್ರೀನ್ ಸಿಗ್ನಲ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದ ಜನರು ಹಲವು ದಿನಗಳಿಂದ ಕಾಯುತ್ತಿದ್ದ ಕೊರೊನಾ ಸೋಂಕಿಗೆ ಲಸಿಕೆ ಬಂದಿದ್ದು, ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ -ಡಿಸಿಜಿಐ ಅಧ್ಯಕ್ಷ ವಿ.ಜಿ.ಸೋಮಾನಿ, ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರದು ಲಸಿಕೆಗಳನ್ನು ಭಾರದಲ್ಲಿ ತುರ್ತು ಸಂದರ್ಭಗಳಲ್ಲಿ ಬಳಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

Home add -Advt

ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿರುವ ಕೋವ್ಯಾಕ್ಸಿನ್ ಹಾಗೂ ಆಸ್ಟ್ರಾಜನಿಕಾ, ಆಕ್ಸ್ ಫರ್ಡ್ ವಿವಿ ಅಭಿವೃದ್ಧಿ ಪಡಿಸಿರುವ ಕೋವಿಶೀಲ್ಡ್ ಲಸಿಕೆ ಬಳಕೆಗೆ ಅನುಮತಿ ನೀಡಲಾಗಿದೆ ಎಂದರು. ಈ ಮೂಲಕ ಶೀಘ್ರದಲ್ಲಿಯೇ ಭಾರತ ಸರ್ಕಾರದಿಂದ ಈ ಲಸಿಕೆಗಳ ಅದಿಕೃತ ವಿತರಣೆ ಕೂಡ ಆರಂಭವಾಗುವ ಸಾಧ್ಯತೆಯಿದೆ.

Related Articles

Back to top button