ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಲ್ಲೇಶ್ವರದ ರಾಜಾಶಂಕರ್ ಆಟದ ಮೈದಾನದಲ್ಲಿ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಿರ್ಲಕ್ಷ್ಯ ತೋರಿರುವ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅವರ ಅಮಾನತಿಗೆ ಆದೇಶ ಮಾಡಲಾಗಿದ್ದು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ ಅವರನ್ನು ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗಿದೆ.
2021 ರ ಮೇ 21 ರಂದು ಈ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಘಟನೆಯ ನಂತರ ಸ್ಥಳ ಪರಿಶೀಲನೆ ವೇಳೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಹಾಗೂ ಮೈದಾನ ನಿರ್ವಹಣೆಯಲ್ಲಿ ಕೊರತೆ ಉಂಟಾಗಿದೆ ಎಂದು ಹೇಳಲಾಗಿದೆ.
ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಒಂದು ವಾರದೊಳಗೆ ಪರಿಶೀಲಿಸಿ ಸಂಪೂರ್ಣ ವರದಿ ನೀಡುವಂತೆ ತಿಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ