ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆಂಬಿಡದೇ ಕಾಡುತ್ತಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಬೆನಲ್ಲೇ ಇದೀಗ ಡಿಸಿಎಂ ಅಶ್ವತ್ಥನಾರಾಯಣ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತ: ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
ಕೊವಿಡ್ ಹಿನ್ನೆಯಲ್ಲಿ ಸೋಮವಾರದಿಂದ ಆರಂಭವಾಗುವ ಅಧಿವೇಶನದಲ್ಲಿ ಭಾಗಿಯಾಗುತ್ತಿಲ್ಲ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ