ಬಿಜೆಪಿ ಸರ್ಕಾರ ಉರುಳಿಸುವ ಷಡ್ಯಂತ್ರ ಕೇವಲ ವದಂತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉರುಳಿಸುವ ಷಡ್ಯಂತ್ರ ನಡೆದಿದೆ ಎಂಬುದು ಕೇವಲ ಸುಳ್ಳು ವದಂತಿ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಡಿಸಿಎಂ ಅಶ್ವತ್ಥ್ ನಾರಾಯಣ್, ಯೋಗೇಶ್ವರ್ ನೇತೃತ್ವದಲ್ಲಿ ಸರ್ಕಾರ ಬೀಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬುದು ಶುದ್ಧ ಸುಳ್ಳು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಯಾವ ತೊಂದರೆಯೂ ಇಲ್ಲ ಎಂದರು.

ಇನ್ನು ಶೀಘ್ರದಲ್ಲೇ ಸಚಿವ ಸಂಪುಟ ಮತ್ತೊಮ್ಮೆ ವಿಸ್ತರಣೆಯಾಗಲಿದೆ. ಈ ವೇಳೆ ಎಲ್ಲರ ಅಸಮಾಧಾನಗಳೂ ಶಮನವಾಗಲಿದೆ ಎಂದು ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಸಿ.ಪಿ. ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಕಾರಣಕ್ಕೆ ಅವರು ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಆದರೆ, ಚುನಾವಣೆಯಲ್ಲಿ ಸೋಲನುಭವಿಸಿರುವ ಕಾರಣ ಅವರಿಗೆ ಸಚಿವ ಸ್ಥಾನ ನೀಡಲು ಪಕ್ಷದ ಇತರೆ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button