
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಗುರುವಾರ ಚಿಕ್ಕೋಡಿಗೆ ಆಗಮಿಸಲಿದ್ದಾರೆ.
ಬುಧವಾರ ಸಂಜೆ ವಿಶೇಷ ವಿಮಾನದ ಮೂಲಕ ಹೈದರಾಬಾದ್ ಗೆ ತೆರಳಲಿರುವ ಡಿ.ಕೆ.ಶಿವಕುಮಾರ ಅಲ್ಲಿಯೇ ವಾಸ್ತವ್ಯ ಮಾಡಿ ಗುರುನಾರ ಬೆಳಗ್ಗೆ ಅಲ್ಲಿನ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಗುರುವಾರ ಬೆಳಗ್ಗೆ 11.30ಕ್ಕೆ ಹೈದರಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಕೊಲ್ಲಾಪುರ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಮಧ್ಯಾಹ್ನ 1.15ಕ್ಕೆ ಚಿಕ್ಕೋಡಿಯ ಯಡೂರು ಕಾಡದೇವರ ಮಠದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ವೀರಶೈವ ಲಿಂಗಾಯತ ಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಮಠದ ರಾಜಗೋಪುರವನ್ನು ಉದ್ಘಾಟಿಸಲಿದ್ದಾರೆ.
ಸಂಜೆ 4 ಗಂಟೆಗೆ ಕೊಲ್ಲಾಪುರಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

