Kannada NewsKarnataka NewsLatestPolitics

*ಮೈತ್ರಿ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳಲ್ಲ ಎಂದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮೈತ್ರಿಯಾದರೂ ಮಾಡಿಕೊಳ್ಳಲಿ, ಏಕಾಂಗಿಯಾಗಿಯಾದರೂ ಚುನಾವಣೆ ಎದುರಿಸಲಿ ತಲೆಕೆಡಿಸಿಕೊಳ್ಳಲ್ಲ ಎಂದ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಜೆಡಿಎಸ್ ಏಕಾಂಗಿಯಾಗಿಯಾದರೂ ಚುನಾವಣೆ ಎದುರಿಸಲಿ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಾದರೂ ಚುನಾವಣೆ ಎದುರಿಸಲಿ. ಮೈತ್ರಿ ಬಗ್ಗೆ ನಾವು ಈ ಹಿಂದೆಯೂ ತಲೆಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳಲ್ಲ ಎಂದರು.

Home add -Advt

ನಾವು ಅವರ ಸುದ್ದಿಗೆ ಹೋಗಲ್ಲ, ಈ ಹಿಂದೆ ದೇವೇಗೌಡರು, ಕುಮಾರಸ್ವಾಮಿಯವರು ಜೆಡಿಎಸ್ ಏಕಾಂಗಿಯಾಗಿ ಹೋರಾಡಲಿದೆ ಎಂದಿದ್ದರು. ಹಿಂದೆ ಹಾಗೆ ಹೇಳಿದ್ದ ಅವರ ಮಾತು, ಸಿದ್ಧಾಂತ ಈಗ ಎಲ್ಲಿ ಹೋಯಿತು? ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ನಮ್ಮ ಅಭ್ಯಂತರವಿಲ್ಲ, ಅವರ ನಿಲುವಿನ ಬಗ್ಗೆ ಯಾವ ನಾಯಕರು ಪ್ರತಿಕ್ರಿಯೆ ಕೊಡಬೇಕೋ ಅವರು ಕೊಡುತ್ತಾರೆ ಎಂದು ಹೇಳಿದರು.

Related Articles

Back to top button