ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್ ಎಂದು ದೃಢ ಪಟ್ಟಿದ್ದು, ನನಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.
ನನ್ನ ಸಂಪರ್ಕದಲ್ಲಿದ್ದವರು ಮುಂಜಾಗ್ರತೆವಹಿಸಿ, ಕೋವಿಡ್ ಪರೀಕ್ಷೆಗೊಳಪಟ್ಟು ಕ್ವಾರಂಟೈನ್ ನಲ್ಲಿರುವಂತೆ ಎಂದು ಕೋರುತ್ತೇನೆ.
1/2— Govind M Karjol (ಮೋದಿಯವರ ಕುಟುಂಬ ) (@GovindKarjol) September 22, 2020
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ರೋಗಲಕ್ಷಣಗಳು ಕಾಣಿಸದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.
ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ