ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಜನರ ಜೊತೆಗಿದೆ. ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ಎಲ್ಲಾ ರೀತಿಯ ಸಹಾಯವನ್ನು ಸರ್ಕಾರ ಮಾಡುತ್ತಿದೆ. ನನಗೆ ವಯಸ್ಸಾಗಿದ್ದು ಕೊರೊನಾ ಸೋಂಕಿನಿಂದ ಬೇರೆ ಬಳಲುತ್ತಿರುವುದರಿಂದ 600ರಿಂದ 700 ಕಿ.ಮೀ ದೂರ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ನನಗೆ 70 ವರ್ಷವಾಗಿದೆ. ನಾನು ಇಷ್ಟು ವರ್ಷ ಹೇಗೆ ಕೆಲಸ ಮಾಡಿದ್ದೇನೆ ಎಂಬುದು ಎಲ್ಲರಿಗೂ ಗೊತ್ತು. ಈಗ ನನ್ನ ಹಾಗೂ ನನ್ನ ಕುಟುಂಬ ಕೊರೊನಾ ಸೋಂಕಿನಿಂದ ಬಳಲುತ್ತಿದೆ. ನಿನ್ನೆ ಅನಿವಾರ್ಯವಾಗಿ ಶಿರಾ ಕ್ಷೇತ್ರ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಿದ್ದೆ. ನನ್ನ ಪರಿಸ್ಥಿತಿಯನ್ನು ನಾನು ವಿವರಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ನನ್ನ ಸ್ಥಿತಿ ಅರ್ಥವಾಗಿ ಕಂದಾಯ ಸಚಿವರನ್ನು ಕಲಬುರ್ಗಿಗೆ ಕಳುಹಿಸಿದ್ದಾರೆ. ನೆರೆ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮಳೆಯಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಮಾಡಿ, ಮನೆ ಕೊಡಲು ಸೂಚನೆ ಕೊಟ್ಟಿದ್ದೇವೆ. ಮಳೆ ನಿಂತ ಮೇಲೂ ಮನೆ ಬೀಳುವ ಸಾಧ್ಯತೆ ಇದೆ. ಈ ಕುರಿತು ಎಲ್ಲ ಸೂಚನೆಯನ್ನು ಜಿಲ್ಲಾಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ