ಪ್ರಗತಿವಾಹಿನಿ ಸುದ್ದಿ; ವಿಜಯಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರನಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಡಿಸಿಎಂ ಕಾರಜೋಳ ಪುತ್ರ ವಿಜಯಪುರ ನಗರದಲ್ಲಿ ನೆಲೆಸಿದ್ದು, ಅವರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಇವರು ಸ್ನೇಹಿತನ ಹುಟ್ಟುಹಬ್ಬಕ್ಕೆ ತೆರಳಿದ್ದ ಸಂದರ್ಭದಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೆಮ್ಮು, ಜ್ವರದಂತದ ಕೆಲ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಡಿಸಿಎಂ ಪುತ್ರ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ