ಮಾಜಿ ಮೇಯರ್ ಗಳ ಸಭೆ ನಡೆಸಿದ ಡಿಸಿಎಂ: ಪಾಲಿಕೆ ವಾರ್ಡ್ ಮರುವಿಂಗಡಣೆಯಾಗುತ್ತಾ?

 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ಮಾಜಿ ಮೇಯರ್ ಗಳ ಸಭೆ ನಡೆಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ನಗರದ ಮಾಜಿ ಮೇಯರ್ ಗಳ ಜತೆ ಸಭೆ ಮಾಡಿ ಅವರ ಅಭಿಪ್ರಾಯ, ಸಲಹೆಗಳನ್ನು ಪಡೆದಿದ್ದೇನೆ. ಬೆಂಗಳೂರು ಅಭಿವೃದ್ಧಿಗಾಗಿ ಹೇಗೆ ಹಣ ಸಂಗ್ರಹ ಮಾಡಬಹುದು. ಎಲ್ಲಿ ನ್ಯೂನ್ಯತೆಗಳಿವೆ, ತ್ಯಾಜ್ಯ ನಿರ್ವಹಣೆ, ರಸ್ತೆಗಳಲ್ಲಿ ಕಸ ಹಾಕುತ್ತಿರುವ ಬಗ್ಗೆ ಚರ್ಚೆ ಮಾಡಿದ್ದೇವೆ. ಇದನ್ನು ಹೇಗೆ ತಡೆಯಬಹುದು ಎಂದು ಸಲಹೆ ಪಡೆದಿದ್ದು, ಕಸದ ವಾಹನ ಟ್ರ್ಯಾಕ್ ಮಾಡುವುದು, ಕಸವನ್ನು ಎಲ್ಲೆಂದರಲ್ಲಿ ಎಸೆಯುವ ವಾಹನಗಳಿಗೆ ಯಾವ ರೀತಿ ದಂಡ ವಿಧಿಸಬೇಕು, ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಿದ್ದೇನೆ. ಸದಸ್ಯದಲ್ಲೇ ಇದನ್ನು ನಿಯಂತ್ರಿಸಲು ಯಾವ ಸೂಚನೆ ನೀಡಬೇಕು ಎಂದು ಅಧಿಕಾರಿಗಳ ಜತೆ ಸಭೆ ಮಾಡಿ ತೀರ್ಮಾನಿಸುತ್ತೇನೆ ಎಂದರು.
ಸೋಮವಾರ ಬೆಂಗಳೂರು ನಗರದ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದು, ಅವರಿಂದಲೂ ಸಲಹೆಗಳನ್ನು ಪಡೆಯುತ್ತೇನೆ. ನಂತರ ನಮ್ಮ ಪಕ್ಷದ ಶಾಸಕರ ಜತೆ ಪ್ರತ್ಯೇಕ ಸಭೆ ಮಾಡುತ್ತೇನೆ. ಸರಿಯಾದ ಸಮಯಕ್ಕೆ ತೆರಿಗೆ ಕಟ್ಟಿದರೆ ನೀಡುವ ವಿನಾಯಿತಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ದಿನಾಂಕದ ಒಳಗಾಗಿ ವಾರ್ಷಿಕ ತೆರಿಗೆ ಪಾವತಿ ಮಾಡಿದರೆ ಶೇ.5ರಷ್ಟು ಮರುಪಾವತಿ ಮಾಡಲಾಗುವುದು ಎಂದು ಹೇಳಿದರು.
ಪಾಲಿಕೆ ವಾರ್ಡ್ ಮರುವಿಂಗಡಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ಚರ್ಚೆ ಮಾಡಿದ್ದು, ಇದಕ್ಕಾಗಿ ನೇಮಕ ಮಾಡಿರುವ ಸಮಿತಿ ಜತೆ ಚರ್ಚೆ ಮಾಡುತ್ತೇನೆ’ ಎಂದು ತಿಳಿಸಿದರು.

ಯಡಿಯೂರಪ್ಪ ಮನೆಗೆ ತೆರಳಿ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ

https://pragati.taskdun.com/dk-sivakumar-who-went-to-yeddyurappas-house-and-talked/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button