Latest

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಚಿವರ ಪಟ್ಟು; ಸಿಎಂ ಭೇಟಿಯಾಗಿ ಒತ್ತಡ ಹೇರಿದ ನಾಯಕರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಾಧಿಕಾರ ರಚನೆಗೆ ಒತ್ತಾಯಗಳು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಇಂದು ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಚಿವ ವಿ.ಸೋಮಣ್ಣ, ಬಿ.ಸಿ.ಪಾಟೀಲ್ ಸೇರಿದಂತೆ ಹಲವು ನಾಯಕರು, ಸಿಎಂ ಯಡಿಯೂರಪ್ಪ ಭೇಟಿಯಾಗಿ ಮನವಿ ಮಾಡಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಸವದಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಬೇಕು ಎಂಬ ಒತ್ತಾಯ ಹಲವು ವರ್ಷಗಳಿಂದ ಇರುವ ಬೇಡಿಕೆ. ಈಗ ಸಿಎಂ ಭೇಟಿಯಾಗಿ ಒತ್ತಡ ಹೇರಿದ್ದೇವೆ. ಮುಖ್ಯಮಂತ್ರಿಗಳು ಸ್ವಲ್ಪ ಸಮಯಾವಕಾಶ ನೀಡುವಂತೆ ಕೇಳಿದ್ದಾರೆ. ಈ ಬಗ್ಗೆ ಹೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿಯೂ ಭರವಸೆ ನೀಡಿದ್ದಾರೆ ಎಂದರು.

ಒಟ್ಟಾರೆ ರಾಜ್ಯದಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಲಿಂಗಾಯತ ಸಮುದಾಯಕ್ಕೂ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯಗಳು ಆರಂಭವಾಗಿವೆ. ಹಾಗಾಗಿ ಸಿಎಂ ಯಡಿಯೂರಪ್ಪನವರಿಗೆ ಹೊಸ ತಲೆನೋವು ಆರಂಭವಾದಂತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button