
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೋವಿಡ್ ನಿಂದ ಮೃತರಾಗಿರುವ ಬಿಪಿಎಲ್ ಕುಟುಂಬಗಳಿಗೆ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಸದಾನಂದಗೌಡ, ಸಚಿವರಾದ ಆರ್.ಅಶೋಕ್, ಬಸವರಾಜ ಬೊಮ್ಮಾಯಿ, ಸಚಿವರು ಹಾಗು ಕೆ.ಆರ್ ಪುರಂ ನ ಶಾಸಕರಾಗಿರುವ ಭೈರತಿ ಬಸವರಾಜ್, ಅರವಿಂದ ಲಿಂಬಾವಳಿ ಮತ್ತಿತರರು ಭಾಗವಹಿಸಿದ್ದರು.
ರಾಜ್ಯದಲ್ಲಿ ಕೊರೋನಾದಿಂದ ಸಾವಿಗೀಡಾಗಿರುವ ಬಿಪಿಎಲ್ ಕುಟುಂಬದ ಒಬ್ಬರಿಗೆ ತಲಾ ಒದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಚೆಗೆ ಘೋಷಣೆ ಮಾಡಿದ್ದರು. ಅದರಂತೆ ಲಕ್ಷ್ಮಣ ಸವದಿ ಬೆಂಗಳೂರಿನಲ್ಲಿ ಚೆಕ್ ವಿತರಿಸಿದರು.