Latest

ಡಿಸಿಎಂ ಲಕ್ಷ್ಮಣ ಸವದಿಗೆ ಅಂತರಾಷ್ಟ್ರೀಯ ಗ್ರಾಮೋದಯ ಬಂಧು ಮಿತ್ರ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೈದರಾಬಾದಿನ ಗ್ರಾಮೋದಯ ಚೇಂಬರ್ ಆಫ್ ಕಾಮರ್ಸ್ ಟೆಕ್ನಾಲಜಿ ಸಂಸ್ಥೆಯು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರಿಗೆ ಇಂದು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಗ್ರಾಮೋದಯ ಬಂಧು ಮಿತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

ಈ ಸಂಸ್ಥೆಯ ಮುಖ್ಯಸ್ಥರಾದ ಶ್ರೀನಿವಾಸ ರೆಡ್ಡಿ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸಹಕಾರ, ಸಾಮಾಜಿಕ ಸೇವೆ, ಗ್ರಾಮೀಣಾಭಿವೃದ್ಧಿ ಮುಂತಾದ ಕ್ಷೇತ್ರಗಳಿಗೆ ಸವದಿ ಅವರು ನೀಡಿರುವ ಗುರುತರವಾದ ಸೇವೆಯನ್ನು ಗಮನಿಸಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button