Latest

ಸಾರಿಗೆ ಸಿಬ್ಬಂದಿಗೆ ಸಂಬಳ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ 3 ತಿಂಗಳ ವೇತನ ಮೊತ್ತ 634 ಕೋಟಿ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಸಚಿವರ ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಅಕ್ಟೋಬರ್, ನವಂಬರ್ ಹಾಗೂ ಡಿಸೇಂಬರ್ ಈ 3 ತಿಂಗಳುಗಳ ಸಂಬಳದ ಒಟ್ಟು ಮೊತ್ತವಾದ 634 ಕೋಟಿ 50 ಲಕ್ಷ ರೂ.ಗಳನ್ನುತಕ್ಷಣ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದರಿಂದಾಗಿ ಸಾರಿಗೆ ಸಿಬ್ಬಂದಿಗಳ ಒಟ್ಟು ಮೂರು ತಿಂಗಳುಗಳ ಶೇಕಡ 75 ರಷ್ಟು ವೇತನದ ಮೊತ್ತ 634.50 ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಕ್ರಮ ಕೈಗೊಂಡಂತಾಗಿದೆ. ಉಳಿದ ಶೇಕಡ 25 ರಷ್ಟು ವೇತನಗಳನ್ನು ಸಾರಿಗೆ ಸಂಸ್ಥೆಗಳೇ ತಮ್ಮ ಸಂಪನ್ಮೂಲಗಳಿಂದ ಭರಿಸಲಿವೆ. ಇದರಿಂದಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸುಮಾರು 1,30,000 ಸಿಬ್ಬಂದಿಗಳಿಗೆ ವೇತನ ಪಾವತಿಗೆ ಸಾಧ್ಯವಾದಂತಾಗಿದೆ.

ಕೋವಿಡ್ ನಂತರದಲ್ಲೂ ಸಾರಿಗೆ ಸಂಸ್ಥೆಗಳ ಆದಾಯ ಶೇಕಡ 30 ರಷ್ಟನ್ನು ಮೀರದಿರುವುದರಿಂದ ಸಾರಿಗೆ ಸಂಸ್ಥೆಗಳ ಸಂಪನ್ಮೂಲಕ್ಕೆ ತೀವ್ರನಷ್ಟ ಉಂಟಾಗಿದ್ದರಿಂದ ಸವದಿ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅವರ ಮನವೊಲಿಸಿದ್ದಾರೆ.

Home add -Advt

ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ವೇತನ ಪಾವತಿಗೆ ಕ್ರಮಕೈಗೊಂಡ ಮುಖ್ಯಮಂತ್ರಿಯವರ ಕ್ರಮಕ್ಕೆ ಸಚಿವ ಸವದಿ ಸಾರಿಗೆ ಸಂಸ್ಥೆಗಳ ಪರವಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

Related Articles

Back to top button