Latest

ಸಾರಿಗೆ ವಲಯಕ್ಕೆ ಬಜೆಟ್ ನಲ್ಲಿ ದಾಖಲೆಯ ಅನುದಾನ ಅಭಿನಂದನಾರ್ಹ: ಡಿಸಿಎಂ ಲಕ್ಷ್ಮಣ ಸವದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದಲ್ಲಿ ಮೂಲಭೂತ ಸೌಕರ್ಯಗಳ ಉನ್ನತಿಕರಣ, ರೈತರ ಆದಾಯ ವೃದ್ಧಿಗೆ ಕ್ರಮ, ಸಾರಿಗೆಗೆ ಆದ್ಯತೆ, ಹೊಸ ಉದ್ಯೋಗವಕಾಶಗಳ ಸೃಷ್ಟಿಗೆ ಯೋಜನೆ, ಆರೋಗ್ಯ, ಕೃಷಿ, ಶಿಕ್ಷಣ ಕ್ಷೇತ್ರಗಳಿಗೂ ವಿಶೇಷ ಅನುದಾನಗಳು ಕೇಂದ್ರ ಬಜೆಟ್ಟಿನ ಪ್ರಮುಖ ಅಂಶಗಳು ಆಗಿರುವುದರಿಂದ ಮುಂದಿನ ದಿನಗಳಲ್ಲಿ ದೇಶವು ಹೊಸ ಅಭಿವೃದ್ಧಿ ಪರ್ವವನ್ನು ಕಾಣಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಜೆಟ್ ನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ಕೇಂದ್ರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ಸಾರಿಗೆ ಹಾಗೂ ಹೆದ್ದಾರಿ ವಲಯಕ್ಕೆ ಇದೇ ಮೊದಲ ಬಾರಿಗೆ ಅತೀ ಹೆಚ್ಚಿನ ದಾಖಲೆಯ ಬಜೆಟ್ ಅನುದಾನವನ್ನು 1,18,101 ಕೋಟಿ ರೂ ಮೀಸಲಿಟ್ಟಿರುವುದು ಅಭಿನಂದನಾರ್ಹ. 18,000 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ರೈಲುಗಳಿಗೂ ಮತ್ತು ಸಿಟಿ ಬಸ್ಸುಗಳಿಗೂ ಸೂಕ್ತ ಸಂಯೋಜನೆ ಕಲ್ಪಿಸಿ ನಗರ ಸಾರಿಗೆಯನ್ನು ಸಮರ್ಪಕವಾಗಿ ನಿರ್ವಹಿಸಲು 20,000 ಹೊಸ ಬಸ್ಸುಗಳ ಸಂಚಾರವನ್ನು ಪ್ರಾರಂಭಿಸಲಾಗುವುದು ಇದಕ್ಕೆ ಖಾಸಗಿ ಸಹಭಾಗಿತ್ವ ಬಳಸಿಕೊಳ್ಳುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button