
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸಿ ಸಚಿವರ ಮಟ್ಟದಲ್ಲಿ ಅವುಗಳಿಗೆ ತಕ್ಷಣ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಗುರುವಾರದಂದು ಎಲ್ಲ ಸಚಿವರುಗಳು ಕಡ್ಡಾಯವಾಗಿ ವಿಧಾನಸೌಧ ಮತ್ತು ವಿಕಾಸಸೌಧದ ಅವರ ಕಚೇರಿಗಳಲ್ಲಿ ಖುದ್ದಾಗಿ ಹಾಜರಿರುವಂತೆ ಬಿಜೆಪಿಯ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಕಚೇರಿಲ್ಲಿ ಸಾರ್ವಜನಿಕರ ಸಮಸ್ಯೆ ಮತ್ತು ಕುಂದುಕೊರತೆಗಳನ್ನು ಪರಿಶೀಲಿಸಿ ಪರಿಹಾರ ಕಲ್ಪಿಸುವ ಪ್ರಯತ್ನ ನಡೆಸಿದರು.
ಇನ್ಮುಂದೆ ಪ್ರತಿ ಗುರುವಾರ ಬಹುತೇಕ ಎಲ್ಲ ಸಚಿವರುಗಳು ವಿಧಾನಸೌಧ ಅಥವಾ ವಿಕಾಸಸೌಧದ ತಮ್ಮ ತಮ್ಮ ಕಚೇರಿಗಳಲ್ಲಿ ಲಭ್ಯ ಇರುವುದರಿಂದ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಲಕ್ಷ್ಮಣ ಸವದಿ ಅವರು ಮನವಿ ಮಾಡಿದ್ದಾರೆ.
ಜನಸಾಮಾನ್ಯರು ಸಚಿವರುಗಳ ಭೇಟಿಗಾಗಿ ಪ್ರಯಾಸ ಪಡುವುದನ್ನು ತಪ್ಪಿಸಲು ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎರಡು ದಿನದಲ್ಲಿ ಜಾರಕಿಹೊಳಿ ಬ್ರದರ್ಸ್ ಜಂಟಿ ಸುದ್ದಿಗೋಷ್ಠಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ